Naa Ninagenoo Beduvadilla || ನಾ ನಿನಗೇನು ಬೇಡುವದಿಲ್ಲ || Sripathy Shanbhog Vocal || ರಚನೆ ಶ್ರೀಪಾದರಾಜರು

Описание к видео Naa Ninagenoo Beduvadilla || ನಾ ನಿನಗೇನು ಬೇಡುವದಿಲ್ಲ || Sripathy Shanbhog Vocal || ರಚನೆ ಶ್ರೀಪಾದರಾಜರು

ನಾ ನಿನಗೇನು ಬೇಡುವುದಿಲ್ಲ - ಎನ್ನ
ಹೃದಯಕಮಲದೊಳು ನೆಲೆಸಿರು ಹರಿಯೆ

ಶಿರ ನಿನ್ನ ಚರಣಕ್ಕೆರಗಲಿ ಚಕ್ಷು
ಎರಕದಿಂದಲಿ ನಿನ್ನ ನೋಡಲಿ ಹರಿಯೆ
ಕರಣ ಗೀತಂಗಳ ಕೇಳಲಿ ನಾಸಿಕ
ನಿರ್ಮಾಲ್ಯಾನುದಿನ ಘ್ರಾಣಿಸಲಿ ಹರಿಯೆ||

ನಾಲಿಗೆ ನಿನ್ನ ಕೊಂಡಾಡಲಿ ಎನ್ನ
ತೋಳು ಕರಂಗಳ ಮುಗಿಯಲಿ ಹರಿಯೆ
ಕಾಲು ತೀರ್ಥಯಾತ್ರೆಗೆ ಪೋಗಲಿ ಮನ
ಖ್ಯಾಲಿಯಿಂದಲಿ ನಿನ್ನ ಸ್ಮರಿಸಲಿ ಹರಿಯೆ||

ಚಿತ್ತ ನಿನ್ನೊಳು ಮುಳುಗಾಡಲಿ ನಿನ್ನ
ಭಕ್ತ ಜನರ ಸಂಗ ದೊರಕಲಿ ಹರಿಯೆ
ವೃತ್ತಿ ತತ್ವಯೋಗಾಭ್ಯಾಸಕ್ಕಾಗಲಿ ರಂಗ-
ವಿಠಲ ನಿನ್ನ ದಯವಾಗಲಿ ಹರಿಯೆ||

Комментарии

Информация по комментариям в разработке