INDEPENDENCE DAY 2024 JIPS

Описание к видео INDEPENDENCE DAY 2024 JIPS

ಚನ್ನರಾಯಪಟ್ಟಣದ ಜ್ಞಾನಸಾಗರ ಶಾಲೆಯಲ್ಲಿ ಸಂಭ್ರಮದ 78ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆ.
ಜ್ಞಾನಸಾಗರ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಆವರಣದಲ್ಲಿಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಡಾ. ಕೆ. ನಾಗೇಶ್ ರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ನಂತರ ಚನ್ನರಾಯಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಮ್ಮ ಶಾಲೆಯ ಬ್ಯಾಂಡ್ ಸೆಟ್ ವಿದ್ಯಾರ್ಥಿಗಳಿಗೆ ತಾಲ್ಲೂಕು ಆಡಳಿತ ವತಿಯಿಂದ ವಿಶೇಷ ಬಹುಮಾನ ನೀಡಲಾಯಿತು. ಪಥಸಂಚಲನದಲ್ಲಿ ಪ್ರಥಮ ಸ್ಥಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದು ಅರ್ಥಪೂರ್ಣ ಸ್ವಾತಂತ್ರ್ಯೋತ್ಸವವನ್ನು ಆಚರಿಸಿ ಸಂಭ್ರಮಿಸಿದರು. ವಿಜೇತರಾದ ವಿದ್ಯಾರ್ಥಿಗಳ ತಂಡಕ್ಕೆ ಸಂಸ್ಥೆಯ ಅಧ್ಯಕ್ಷರಾದ ಡಾ.ಕೆ.ನಾಗೇಶ್ ರವರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಭಾರತಿ ನಾಗೇಶ್ ರವರು, ಡೀನ್ ರವರಾದ ಡಾ.ಸುಜಾ ಪಿಲಿಫ್ ರವರು, ಆಡಳಿತಾಧಿಕಾರಿಗಳಾದ ಶ್ರಿ ಪಿಲಿಫ್ ರವರು ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆಗಳನ್ನು ತಿಳಿಸಿದರು

Комментарии

Информация по комментариям в разработке