ಹಳೇಬೀಡು

Описание к видео ಹಳೇಬೀಡು

ಐತಿಹಾಸಿಕ ಹಿನ್ನಲೆ:
ಸುಮಾರು ಒಂಬತ್ತನೆಯ ಶತಮಾನದಲ್ಲಿ ರಾಷ್ಟ್ರಕೂಟರ ದೊರೆ ದೋರ ಎಂಬುವವನು ಈ ಊರಿನಲ್ಲಿ ದೊಡ್ಡಕೆರೆಯೊಂದನ್ನು ಕಟ್ಟಿಸಿದನೆಂದು ಶಾಸನಗಳಿಂದ ತಿಳಿದುಬರುತ್ತದೆ. ಈ ಕೆರೆಯು ೧೨೦೦ ಎಕರೆಗೂ ಮೀರಿ ವ್ಯಾಪ್ತಿಯನ್ನು ಹೊಂದಿದ್ದು ಈಗಲೂ ಕೆರೆಯು ನೀರಿನಿಂದ ತುಂಬಿಕೊಂಡಾಗ ಸಮುದ್ರದಂತೆ ತೋರುತ್ತದೆ. ಈ ಕಾರಣದಿಂದಾಗಿಯೇ ಈ ಕೆರೆಯನ್ನು ದೋರಸಮುದ್ರ ಎಂದು ಉಲ್ಲೇಖಿಸಲಾಗಿದೆಯೆಂದು ತಿಳಿದುಬರುತ್ತದೆ.
ಅಂದಿನ ಕಾಲಕ್ಕೆ ದೋರಸಮುದ್ರ ಎನ್ನುವ ಹೆಸರೇ ಊರಿಗೂ ಇತ್ತೆಂದು ಹೊಯ್ಸಳರ ಕಾಲದ ಅನೇಕ ಶಾಸನಗಳಿಂದ ತಿಳಿದುಬರುತ್ತದೆ. ಹದಿನೆಂಟನೆಯ ಶತಮಾನದ ಆಸು-ಪಾಸಿನಲ್ಲಿ ದ್ವಾರಾವತಿ-ದ್ವಾರಸಮುದ್ರ ಎನ್ನುವ ಹೆಸರಿನ ಬಳಕೆಯೂ ಇತ್ತೆಂದು ಜನಪದದಿಂದ ತಿಳಿದುಬರುತ್ತದೆ. ದೋರಸಮುದ್ರ ಕೆರೆಯೇ ಅಂದಿನ ಕಾಲಕ್ಕೆ ಇಡೀ ರಾಜಧಾನಿಯ ಮತ್ತು ಸುತ್ತಲಿನ ಪ್ರದೇಶಗಳ ಮುಖ್ಯ ನೀರಾವರಿ ಸೌಲಭ್ಯವಾಗಿತ್ತು.
ಇಂದಿನ ಬೇಲೂರು ಪಟ್ಟಣದ ಮೂಲಕ ಹರಿಯುವ ಯಗಚಿ ನದಿ ಅಥವಾ ಸೋಮವತೀ ಎನ್ನುವ ನದಿಯು ಈ ಕೆರೆಗೆ ನೀರುಣಿಸುವ ಮುಖ್ಯ ಮೂಲವಾಗಿತ್ತು. ಹನ್ನೆರಡೆನೆಯ ಶತಮಾನದಲ್ಲೇ ನದಿಯ ಪಾತ್ರದಿಂದ ದೊಡ್ಡ ಕಾಲುವೆಗಳನ್ನು ನಿರ್ಮಿಸಿರುವ ಕುರುಹುಗಳನ್ನು ಇಂದೂ ಕಾಣಬಹುದು. ಕೆಲವು ಕಾಲುವೆಗಳು ಇಂದಿಗೂ ದೊಡ್ಡಕೆರೆಗೆ ನೀರುಣಿಸುತ್ತಿವೆ..

Комментарии

Информация по комментариям в разработке