ಭಾವಗೀತೆ ಅಂತರಂಗದಾ ಮೃದಂಗ ಅಂತು ತೊಂ ತನಾನ /Antarangada Mrudang Antu Toma Tanaana

Описание к видео ಭಾವಗೀತೆ ಅಂತರಂಗದಾ ಮೃದಂಗ ಅಂತು ತೊಂ ತನಾನ /Antarangada Mrudang Antu Toma Tanaana

Sung by: Saraswati Sabarad

Lyrics by : Ambikatanayadatt (ದ. ರಾ. ಬೇಂದ್ರೆ)
Music by : Mysore Anantaswami

ಅಂತರಂಗದ ಮೃದಂಗ ಅಂತು ತೊಂ ತನಾನ
ಚಿತ್ತ ತಾಳ ಬಾರಿಸುತಲಿತ್ತು ಝಂ ಝಣಣ ನಾನಾ
ನೆನಪು ತಂತಿ ಮೀಟುತಿತ್ತು ತೊಂತನನ ತಾನ, ತೊಂತನನ ತಾನ,
ತೊಂತನನ ತಾನ

ಹಲವು ಜನ್ಮದಿಂದ ಬಂದ ಯಾವುದೋನೋ ಧ್ಯಾನ
ಏಕನಾದದಂದದೊಂದು ತಾನದ ವಿತಾನ
ತನಗೆ ತಾನೇ ಸೋಲುತಿಹುದು ನೂಲುತಿಹುದು ಗಾನ ||

ಕಲ್ಪದಾದಿಯಲ್ಲೆ ನನ್ನ ನಿನ್ನ ವಿರಹವಾಗಿ
ಎಲ್ಲೋ ಏನೋ ನಿನ್ನ ಹುಡುಕಿ ಕಾಂಬ ಕಣ್ಣೆ ಹೋಗಿ
ಮರೆವೆಗೊಂಡು ಬಿದ್ದೆ ನಾನು ನೆಲದ ಮಣ್ಣು ತಾಗಿ ||

ಕತ್ತಲಲ್ಲೆ ಬೆಳಕು ಮಿಂಚಿ ಪಡೆದೀತೇಳು ಬಣ್ಣ
ಮೂಕ ಮೌನ ತೂಕ ಮೀರಿ ದನಿಯು ಹುಟ್ಟಿ ಸಣ್ಣ
ಕಣ್ಣ ಮಣ್ಣ ಕೂಡಲಲ್ಲಿ ಹಾಡು ಕಟ್ಟಿತಣ್ಣ ||

Facebook link
https://www.facebook.com/profile.php?...

Комментарии

Информация по комментариям в разработке