Dasara Pada: Anjikinyatakayya (M Balamurali Krishna)

Описание к видео Dasara Pada: Anjikinyatakayya (M Balamurali Krishna)

Vocals: M Balamurali Krishna
Composer: Shri Purandara Dasaru
Raga: Kalyani
Tala: Atta

ಅಂಜಿಕಿನ್ಯಾತಕಯ್ಯ ಸಜ್ಜನರಿಗೆ
ಭಯವು ಇನ್ಯಾತಕಯ್ಯ ॥ಪ॥

ಸಂಜೀವರಾಯರ ಸ್ಮರಣೆ ಮಾಡಿದ ಮೇಲೆ ॥ಅ.ಪ॥
ಕನಸಿಲಿ ಮನಸಿಲಿ ಕಳವಳವಾದರೆ
ಹನುಮನ ನೆನೆದರೆ ಹಾರಿಹೋಗದೆ ಭೀತಿ ॥೧॥

ರೋಮ ರೋಮಕೆ ಕೋಟಿ ಲಿಂಗವುದುರಿಸಿದ
ಭೀಮನ ನೆನೆದರೆ ಬಿಟ್ಟು ಹೋಗದೆ ಭೀತಿ ॥೨॥

ಪುರಂದರವಿಠಲನ ಪೂಜೆಯ ಮಾಡುವ
ಗುರು ಮಧ್ವರಾಯರ ಸ್ಮರಣೆ ಮಾಡಿದ ಮೇಲೆ ॥೩॥

Комментарии

Информация по комментариям в разработке