2 ಪೇತ್ರ 3:1-18 Bro/Jesus Bible@KannadaBible103

Описание к видео 2 ಪೇತ್ರ 3:1-18 Bro/Jesus Bible@KannadaBible103

2 ಪೇತ್ರ 3:1-18 Bro/Jesus Bible@KannadaBible103

ದೇವರ ದಿನವು ತಡಮಾಡಿದರೂ ಅದು ಬರುವದು ನಿಶ್ಚಯ
31 ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. 2 ಪರಿಶುದ್ಧ ಪ್ರವಾದಿಗಳು✽ ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ✽ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು✽ ಈ ಎರಡು ಪತ್ರಿಕೆಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ಸರಳ ಮನಸ್ಸನ್ನು ಪ್ರೇರಿಸಿದ್ದೇನೆ.
3 ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು✽ ಬಂದು ಕುಚೋದ್ಯಮಾಡುತ್ತಾ – 4 ಆತನ ಪ್ರತ್ಯಕ್ಷತೆಯ✽ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ನಿದ್ರೆ ಹೊಂದಿದ ದಿನ ಮೊದಲುಗೊಂಡು ಸಮಸ್ತವೂ ಲೋಕಾದಿಯಿಂದಿದ್ದ ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳಬೇಕು. 5 ಹೀಗೆ ಮಾತಾಡುವವರು ಒಂದು ಸಂಗತಿಯನ್ನು ತಿಳಿದರೂ ಬೇಕೆಂದು ಮರೆತು ಬಿಡುತ್ತಾರೆ;✽ ಅದೇನಂದರೆ – ಪೂರ್ವಕಾಲದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ✽ ನೀರಿನಿಂದ ಉಂಟಾಗಿ ನೀರಿನಿಂದ ಆಧಾರಗೊಂಡಿರುವಲ್ಲಿ 6 ✽ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಲಯದಲ್ಲಿ ನಾಶವಾಯಿತು. 7 ಆದರೆ ಈಗಿರುವ ಭೂಮ್ಯಾಕಾಶಗಳು ಅದೇ ವಾಕ್ಯದ✽ ಬಲದಿಂದ ಬೆಂಕಿಯ ಮೂಲಕ ನಾಶವಾಗುವದಕ್ಕೆ ಇಡಲ್ಪಟ್ಟಿವೆ; ಮತ್ತು ಭಕ್ತಿಹೀನರ ಶಿಕ್ಷಾವಿಧಿಯೂ ನಾಶವೂ ಉಂಟಾಗುವ ದಿನಕ್ಕಾಗಿ ಆ ಬೆಂಕಿ✽ ಸಿದ್ಧವಾಗಿದೆ.
8 ✽ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ಮರೆಯಬೇಡಿರಿ. 9 ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ✽ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು✽ ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ. 10 ಆದರೂ ಕರ್ತನ ದಿನವು✽ ಕಳ್ಳನು ಬರುವಂತೆ✽ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ✽ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ✽ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು.
ಲೋಕಾಂತ್ಯವನ್ನು ಎದುರುನೋಡುತ್ತಾ ಪರಿಶುದ್ಧರಾಗಿ ನಡೆಯಿರಿ ಎಂಬ ಬೋಧನೆ
11-12 ಇವೆಲ್ಲವುಗಳು ಹೀಗೆ✽ ಲಯವಾಗಿ ಹೋಗುವದರಿಂದ ನೀವು ದೇವರ ದಿನದ✽ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಹಾರೈಸುತ್ತಾ✽ ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ✽ ಉಳ್ಳವರಾಗಿರಬೇಕಲ್ಲಾ; ಆ ದಿನದಲ್ಲಿ ಆಕಾಶಮಂಡಲವು ಬೆಂಕಿ✽ ಹತ್ತಿ ಲಯವಾಗಿ ಹೋಗುವದು, ಸೂರ್ಯಚಂದ್ರ✽ ನಕ್ಷತ್ರಗಳು ಉರಿದು ಕರಗಿ ಹೋಗುವವು. 13 ಆದರೆ ನಾವು ದೇವರ ವಾಗ್ದಾನವನ್ನು ನಂಬಿ ನೂತನಾಕಾಶಮಂಡಲವನ್ನೂ ನೂತನಭೂಮಂಡಲವನ್ನೂ✽ ಎದುರು ನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.✽
14 ✽ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ. 15 ನಮ್ಮ ಕರ್ತನ ದೀರ್ಘಶಾಂತಿಯು✽ ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ಇದೇ ಅಭಿಪ್ರಾಯಕ್ಕೆ ಸರಿಯಾಗಿ ನಮ್ಮ ಪ್ರಿಯ ಸಹೋದರನಾದ ಪೌಲನು✽ ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು. 16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಬರೆಯುವಾಗ ಹೀಗೆ ಬೋಧಿಸಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ಮಾತುಗಳು ತಿಳಿಯುವದಕ್ಕೆ ಕಷ್ಟವಾಗಿವೆ.✽ ವಿದ್ಯಾಹೀನರೂ ಚಪಲಚಿತ್ತರೂ✽ ಹೇಗೆ ನಮಗಿರುವ ವಿುಕ್ಕಾದ ಗ್ರಂಥಗಳಿಗೆ✽ ತಪ್ಪಾದ ಅರ್ಥಮಾಡಿಕೊಂಡಿದ್ದಾರೋ✽ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು✽ ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.✽ 17 ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ಅಧರ್ಮಿಗಳ ಭ್ರಾಂತಿಯ ಸೆಳವಿಗೆ ಸಿಕ್ಕಿಕೊಂಡು✽ ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಟರಾಗದಂತೆ✽ ಎಚ್ಚರಿಕೆಯಾಗಿರಿ.✽ 18 ನೀವು ಕೃಪೆಯಲ್ಲಿಯೂ✽ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ✽ ಅಭಿವೃದ್ಧಿಯನ್ನು✽ ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ.✽ ಆಮೆನ್.

Комментарии

Информация по комментариям в разработке