Gajendra Moksha | ದುಸ್ವಪ್ನ - ದುಷ್ಫಲ ಪರಿಹಾರಕ್ಕಾಗಿ ಗಜೇಂದ್ರಮೋಕ್ಷ | Sri Vadirajaru | Anantha Kulkarni

Описание к видео Gajendra Moksha | ದುಸ್ವಪ್ನ - ದುಷ್ಫಲ ಪರಿಹಾರಕ್ಕಾಗಿ ಗಜೇಂದ್ರಮೋಕ್ಷ | Sri Vadirajaru | Anantha Kulkarni

Listen the Devotional Album "Gajendra Moksha" Sung By: Anantha Kulkarni Exclusively on JnanaGamya Prasarana 𝄞 A Spiritual Musical Series 𝄞

𝄞 Song : Gajendra Moksha / गजेन्द्र मोक्ष / ಗಜೇಂದ್ರಮೋಕ್ಷ
𝄞 Album : Gajendra Moksha / ಗಜೇಂದ್ರಮೋಕ್ಷ
𝄞 Lyric: Shri Vadirajaru / ಶ್ರೀ ವಾದಿರಾಜರು
𝄞 Music & Rendition : Anantha Kulkarni
𝄞 Program Supervision : Srinivasa Murthy
------------------------------
Original Sound Recording Made by: JnanaGamya Prasarana
Banner/Label : JnanaGamya Prasarana
Re-Audio Master : Tejaswi Studio
Video Editing : Tejaswi Studio
Cover Design : Supraja Vinyasa
All rights reserved. © & ℗ 2021 : Copyright & Published by : JnanaGamya Prasarana

⚜Subscribe and Stay updated with more Spiritual Discourses / Devotional Music
⚜Please don't forget to Link share and invite your friends and family
⚠️Please note : Unauthorised uploading of this video on any online portal will incite legal action

𝄞 Enjoy and stay connected with us!!
►Free Subscribe to JnanaGamya :    / jnanagamyaprasarana  
►Like us on Facebook :   / jnanagamyaprasarana  
►Follow us on Twitter :   / jnana_gamya  
-----------------------------------------
❁ JnanaGamya PrasaraNa organization owns all the required copyright for broadcasting this audio from the involved artists and organizers.
❁ JnanaGamya PrasaraNa - an institution devoted in spreading the true knowledge. We are presenting the timely contextual content abundantly over the years. Support from the society will enrich us to provide more such significant content continuously to the seekers. You can sponsor series of programs or a single program to help this cause. Our's is a budding organization and we do not have any representatives. Hence, if you want to help us in spreading the true knowledge, please contact us directly. [email protected] / + 91 9449153529
#JnanaGamyaDasarapada #JnanaGamyaHarikathe #JnanaGamyaDevotional #JnanaGamya_Sanskrit_Devotional #JnanaGamyaMusic

ಶ್ರೀನಾಥ ಪಾರ್ವತಿಯ ನಾಥ ಶರಣೆಂಬೆ | ವಾಣಿ ಭಾರತಿಯ ಗಜಮುಖನ ಬಲಗೊಂಬೆ ||
ನಾನು ಬಲ್ಲಷ್ಟು ಪೇಳುವೆನು ಈ ಕಥೆಯ | ಶ್ರೀನಾಥ ಗಜರಾಜಗೊಲಿದ ಸಂಗತಿಯ || ೧ ||
ಚಪನ್ನ ದೇಶ ದೇಶದ ರಾಯರೊಳಗೆ | ಉತ್ತಮದ ದೇಶ ಗೌಳಾದೇಶದಲ್ಲಿ ||
ವಿಷ್ಣು ಭಕ್ತರೊಳು ಇಂದ್ರದ್ಯುಮ್ನ ನೃಪನು | ಮತ್ತೆ ಭೂಸುರರ ಪಾಲಿಸುತ್ತಿದ್ದ ತಾನು || ೨ ||
ಚಿತ್ತದಲ್ಲಿ ನರಹರಿಯ ನೆನೆದು ಚಿಂತಿಸುತ | ಪುತ್ರಮಿತ್ರಾದಿ ಬಂಧುಗಳ ವರ್ಜಿಸುತ ||
ಧ್ಯಾನದಲಿ ನರಹರಿಯ ನೆನೆದು ಚಿಂತಿಸುತ | ಆನೆಕುದುರೆಯ ರಾಜ್ಯಗಳನು ತ್ಯಜಿಸುತ್ತ || ೩ ||
ಸರ್ಪಶಯನನ ಧ್ಯಾನದಲ್ಲಿದ್ದ ತಾನು | ಮತ್ತೆ ತ್ರಿಕೊಟಪರ್ವತಕಾಗಿ ಬಂದು ||
ನಾಗಶಯನನ ಧ್ಯಾನದಲ್ಲಿದ್ದ ತಾನು | ಮೇರುಮಂದರದ ಸಮೀಪಕ್ಕೆ ಬಂದು ||೪ ||
ಸಿದ್ದ ಕಿನ್ನರರು ಗಂಧರ್ವರಿಗೆ ಸ್ಥಾನ | ಎದ್ದೆದ್ದು ಕುಣಿವ ಮೃಗಖಗಗಳ ಸೀಮ ||
ಎತ್ತ ನೋಡಲು ನಾಲ್ಕು ದೇಶ ವಿಸ್ತೀರ್ಣ | ಸುತ್ತ ಸುವರ್ಣಮಯ ವಸ್ತುಗಳ ಧಾಮ || ೫ ||
ಹಲವು ನದಿ ಹಲವು ಕೊಳ ಹಲವು ಸರೋವರದಿ | ಹಲವು ಪರಿ ಪುಷ್ಪಗಳು ಮೆರೆವ ಅಳಿಕುಲದಿ ||
ಚೆಲುವ ಗಂಧರ್ವ ಕಿನ್ನರಿಯರ ಸ್ಥಾನ | ಕುಣಿವ ನವಿಲುಗಳ ಗಿಳಿಕೋಗಿಲೆಯ ಗಾನ || ೬ ||
ಬಂದು ನದಿಯಲ್ಲಿ ಸ್ನಾನವನ ಮಾಡಿದನು | ಚಂದ ದಿಕ್ಕಿದನು ದ್ವಾದಶ ನಾಮಗಳನು ||
ಸಂಧ್ಯಾವಂದನೆ ಮಾಡಿ ಪದ್ಮ ಆಸನದಿ | ಇಂದಿರಾಪತಿಯ ಮನದೊಳಗಿರಿಸಿ ತಾನು || ೭ ||
ಅಂದಾಗ ಆಯೆಡೆಗೆ ಅಗಸ್ತ್ಯಮುನಿ ಬಂದ | ನಿಂದಿರ್ದು ವಂದನೆಯ ಮಾಡಲಿಲ್ಲೆಂದ ||
ಎಂದೆನುತ ಮನದಿ ಕೋಪಿಸುತ ಶಾಪಿಸಿದ | ಕುಂಜರದ ರೂಪಾಗಿ ಜನಿಸು ಹೋಗೆಂದ || ೮ ||
ತಪ್ಪುಂಟು ಮಹರ್ಷಿಯೆ ಕೇಳು ಬಿನ್ನಪವ | ವಿಶ್ಯಾಪ ಎಂದಿಗಾಗುವುದೆನುತ ಪೇಳು ||
ವಿಷ್ಣು ಚಕ್ರವು ಬಂದು ನಿನ್ನ ಸೋಕುತಲೆ | ವಿಶ್ಯಾಪ ಅಂದಿಗಾಗುವುದೆಂದು ಪೇಳೆ || ೯ ||
ಜ್ಞಾನವಡಗಿದವು ಅಜ್ಞಾನ ವಾವರಿಸೆ | ಸೂರ್ಯ ಮುಳುಗಿದನು ಕತ್ತಲೆ ಮುಸುಕಂತೆ ||
ಧ್ಯಾನಿಸುತ ಹಿಂದುಮುಂದಾಗ ಕುಳಿತಿರಲು | ಅನೆಯಾದನು ನೃಪನು ಆ ಕ್ಷಣದಿ ತಾನು || ೧೦ ||
ಮೇರುಪರ್ವತ ಕದಲಿ ಇಳಿದು ಬರುವಂತೆ | ಮೇಲುಮದ ಕೀಳು ಮದ ಸುರಿಯೆ ಕುಂಭದಲಿ |
ಕಾಡಾನೆ ಕರಿಯಾನೆ ಮರಿಯಾನೆ ಸಹಿತ | ಕೂಡಿಕೊಂಡೆಲ್ಲ ಒಂದಾಗಿ ಸಂಭ್ರಮಿಸಿ ||
ಕಾಡಾನೆಯಾಳಗ್ಹಲವು ಮಕ್ಕಳನೆ ಪಡೆದು | ಕಾನನದೊಳಗೆ ಸಂಚರಿಸುತ್ತಿದ್ದ ತಾನು || ೧೧ ||
ಘಟ್ಟ ಬೆಟ್ಟಗಳ ಹತ್ತುತಲೆ ಇಳಿಯುತಲೆ | ಹಿಟ್ಟು ಹಿಟ್ಟಾಗಿ ಕಲ್ಮರವ ತುಳಿಯುತಲೆ ||
ದಟ್ಟ ಡವಿಯೊಳಗೆ ಸಂಚರವ ಮಾಡುತಲೆ | ಬತ್ತಿದವು ಕೆರೆತೊರೆಯು ಬೇಸಗೆಯು ಬರಲು || ೧೨ ||
ಕಂಡಕಂಡಲ್ಲಿ ಏರುತಲಿ ಇಳಿಯುತಲಿ | ತುಂಡುತುಂಡಾಗಿ ಗಿಡಮರವ ಮುರಿಯುತಲಿ ||
ತಂಡತಂಡದಲ್ಲಿದ ತನ್ನ ಸತಿ ಸುತರು | ಬೆಂಡಾಗಿ ಹಸಿವು ತೃಷೆಯಿಂದ ಬಳಲಿದರು || ೧೩ ||
ಬಾಳೆ ಕಿತ್ತಳೆನಿಂಬೆ ಚೂತ ಮಾದಲವು ದಾಳಿಂಬ ದ್ರಾಕ್ಷಿಖರ್ಜೂರ ಪೇರಳೆಯು ||
ಮೇಲಾದ ಫಲಪುಷ್ಪದಿಂದ ಶೋಭಿಸಲು | ತಾವರೆ ಕೊಳವೊಂದ ಕಂಡ ಗಜರಾಜ || ೧೪ ||
ನವರತ್ನ ಮುತ್ತು ಮಾಣಿಕ್ಯ ಸೋಪಾನ | ಕೊಳದ ಸುತ್ತಲು ಮುತ್ತಿ ಚಕ್ರವಾಕಗಳು ||
ನಲಿಯುತಿವೆ ಹಲವು ಹಕ್ಕಿಗಳು ಹಂಸಗಳು | ಪರಿಮಳಿಸುವಾ ಕೊಳವೆ ಹೊಕ್ಕ ಗಜರಾಜ ||೧೫ ||
ಹೊಡೆಯುತಲಿ ಬಡೆಯುತಲಿ ಕುಡಿಯುತಲಿ ನೀರ | ಮಡುವಿನಲ್ಲಿ ಚೆಲ್ಲುತಲಿ ನಲಿದುವೊಂದಾಗಿ ||
ಕಾಡಾನೆ ಕರಿಯಾನೆ ಮರಿಯಾನೆ ಸಹಿತ | ಕೂಡಿದೋಂಡಿರಲಿಂತು ಸಮ್ಭ್ರದುದಿ ಜಲದಿ || ೧೬ ||
ಮುನಿಯು ಶಾಪದಲೊಂದು ಮಕರಿ ಮಡುವಿನೊಳು | ಹಲವುಕಾಲದಿ ತಪಿಸಿ ಜೀವಿಸುತ್ತಿರಲು ||
ಮದಗಜವು ಪೊಕ್ಕು ಮಡುವನೆ ಕಲುಕು ತಿರಲು ತಡೆಯದಾ ಮಕರಿ ಹಿಡಿಯಿತು ಕರಿಯ ಕಾಲು || ೧೭ ||
ಅತ್ತಿತ್ತ ನೋಡಿದನು ಸುತ್ತ ನೋಡಿದನು | ಎತ್ತ ನೋಡಿದರೂ ಬಿಡದು ಆ ಮಕರಿ ಕಾಲು ||
ಎಳೆದೊಮ್ಮೆ ನೋಡಿದನು ಸೆಳದೊಮ್ಮೆ ನೋಡಿದನು | ಹೇಗೆ ನೋಡಿದರು ಬಿಡದು ಆ ಮಕರಿ ಕಾಲು||೧೮||
ತನ್ನ ಸತಿ ಸುತರೆಲ್ಲ ಸೆಳದರೊಂದಾಗಿ | ತಮ್ಮ ಕೈಲಾಗದೆಂದೆನುತ ತಿರುಗಿದರು |
ಎನ್ನ ಪುಣ್ಯದ ಫಲವು ಹೋಗಿ ನೀವೆಂದ | ದುಮ್ಮಾನದಿಂದ ದೊರದಲ್ಲಿದ್ದರವರು || ೧೯ ||
ಕಚ್ಚುತಲಿ ಸೆಳೆಯುತಲಿ ಆ ಮಕರಿ ಕಾಲು | ರಕ್ತಮಯವಾಗಿ ತುಂಬಿತು ಕೊಳದ ನೀರು |
ಅಕ್ಕಟಾ ಎನಗಿನ್ನು ಗತಿಯಾರು ಎನುತ ದಿಕ್ಕುಗೆಟ್ಟಂತೆ ಮೊರೆಯಿಟ್ಟ ಗಜರಾಜ || ೨೦ ||
ಅಚ್ಯುತಾನಂತ ಶ್ರೀಹರಿಯೆನ್ನ ಕಾಯೋ | ಸಚ್ಚಿದಾನಂದ ಸರ್ವೇಶ್ವರನೆ ಕಾಯೋ ||
ಭಕ್ತವತ್ಸಲನೆ ಭವಭಂಜನನೆ ಕಾಯೋ | ಕಷ್ಟಪಡುತೇನೆ ಕರುಣಿಸಿ ಕರುಣಿ ಕಾಯೋ || ೨೧ ||
NOTE : Lyrics in continued in...Community TAB

Комментарии

Информация по комментариям в разработке