KUDLUTHEERTHA FALLS | One of the must visit place and heaven on the earth The water is super clean

Описание к видео KUDLUTHEERTHA FALLS | One of the must visit place and heaven on the earth The water is super clean

ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಬೀಳುವ ಪ್ರದೇಶವೆಂದು ಖ್ಯಾತಿ ಪಡೆದಿರುವ ಆಗುಂಬೆಯ ದಟ್ಟ ಕಾನನದ ಕಾಲುದಾರಿಯಲ್ಲಿ ನಡೆದೇ ಸಾಗಬೇಕಾದ ಅನಿವಾರ್ಯ ಇರುವ ಕೂಡ್ಲು ತೀರ್ಥವು ಬಳವಳಿದು ಅರಸಿ ಬಂದ ಮೇನಕೆ ಚೆಲುವಿನಿಂದ ಮನಸೂರೆಗೊಳ್ಳುವಂತೆ ಮಾಡಿಬಿಡುತ್ತದೆ.

ದಟ್ಟ ಕಾನನದ ಹೆಬ್ಬಂಡೆಯನ್ನು ಸೀಳಿಕೊಂಡು ಸುಮಾರು ೧೨೦ ಅಡಿ ಎತ್ತರದಿಂದ ಧುಮ್ಮಿಕ್ಕುವ ಆ ರಮಣೀಯತೆಯ ಅಪರಾವತಾರದಂತಹ ಕಂಪ ಸೂಸುತ್ತ ಭೋರ್ಗರೆಯುತ್ತ ಬೀಳುವ ದೃಶ್ಯ ನಿಜಕ್ಕೂ ನಡೆದು ಬಂದ ದಣಿವೆಲ್ಲವನ್ನೂ ಇಂಗಿಸಿಬಿಡುತ್ತದೆ. ನಿತ್ಯ ಹರಿದ್ವರ್ಣದ ಕಾನನವನ್ನು ನೆನಪಿಸುವ ದಟ್ಟ ಅರಣ್ಯ ಪ್ರದೇಶದಲ್ಲಿ ಸುಮಾರು ಒಂದು ಗಂಟೆಯ ನಡಿಗೆಯ ಪಯಣ ಚೇತೋಹಾರಿಯಾದದ್ದು. ಎತ್ತ ನೋಡಿದರೂ ಮುಗಿಲೆತ್ತರಕ್ಕೆ ಬೆಳೆದು ನಿಂತ, ಮುಂದಿನ ಹಾದಿಯೇ ಕಾಣಿಸದಷ್ಟು ಒತ್ತಾಗಿ ಬೆಳೆದು ನಿಂತ ವೃಕ್ಷ ರಾಶಿ, ಅಲ್ಲಲ್ಲಿ ಕಂಡೂ ಕಾಣದೆ ಸದ್ದು ಮಾಡುತ್ತ ಹರಿದಾಡುವ ಸರೀಸೃಪಗಳ ಸಪ್ಪಳ, ಕಾಡು ಪ್ರಾಣಿಗಳ ಕೂಗು, ಪಕ್ಷಿಗಳ ಕಲರವ, ದೂರದ ಸೀತಾ ನದಿಯ ಜಲಪಾತದ ಝಳು ಝಳು ಸದ್ದು ಹೀಗೆ ಎಲ್ಲವೂ ಪ್ರವಾಸಿಗರ ಪಯಣವನ್ನು ಆವಿಸ್ಮರಣೀಯಗೊಳಿಸುತ್ತದೆ.

ಗಗನದಿಂದ ಭುವಿಯತ್ತ ಒಮ್ಮೆಲೆಯೇ ಹೆಬ್ಬಂಡೆಗಳನ್ನು ಸೀಳಿಕೊಂಡು ದೊಪ್ಪೆಂದು ಧುಮ್ಮಿಕ್ಕುವ ಸೀತಾ ನದಿಯ ಕೂಡ್ಲು ತೀರ್ಥದ ಪರಿಸರ ನೋಡುಗರನ್ನು ಯಾವುದೇ ಒಂದು ಕಿನ್ನರ ಲೋಕಕ್ಕೆ ಕರೆದೊಯ್ಯುವಂತೆ ಮಾಡುತ್ತದೆ. ಜಲಪಾತದ ಒಂದು ಪಾರ್ಶ್ವದಲ್ಲಿ ಎಚ್ಚರಿಕೆಯಿಂದ ಝಳಕ ಮಾಡಲು ಅಡ್ಡಿಯಿಲ್ಲ. ಮಳೆಗಾಲದಲ್ಲಿ ಜಿಗಣೆಗಳ ಕಾಟ. ದಟ್ಟ ಕಾಡಿನ ಮಧ್ಯದಲ್ಲಿರುವ ಕಾಲುದಾರಿಯಲ್ಲಿ ಸುಮಾರು ೧.೫ ಕಿ ಮೀ ದೂರ ಸಾಗಬೇಕ

ಅರಣ್ಯ ಇಲಾಖೆಗೆ ಸೇರಿದ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಚಾರಣಿಗರು ಅಥವಾ ಪ್ರವಾಸಿಗರು ಅನುಮತಿ ಮಾತ್ರ ಕಡ್ಡಾಯ[೩]. ಚಾರಣಿಗರು ಅರಣ್ಯ ಇಲಾಖೆಯ ಕಛೇರಿಯಲ್ಲಿ ಪ್ರವೇಶ ಶುಲ್ಕವನ್ನು ಪಾವತಿಸಬೇಕು. ಮಧ್ಯ, ಸಿಗರೇಟು ಹೀಗೆ ನಿಷೇಧಿತ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ. ಸ್ಪಷ್ಟ ಹೆಸರು, ದೂರವಾಣಿ ಮತ್ತು ತಮ್ಮಲ್ಲಿ ಇರುವ ವಸ್ತುಗಳ ಸಮಗ್ರ ಮಾಹಿತಿ ನೀಡಿ ಚಾರಣ ಮುಂದುವರಿಸ ಬೇಕು. ಜಲಪಾತವನ್ನು ತಲುಪಲು ಸೀತಾನದಿಯನ್ನು ಹಾದುಹೋಗಬೇಕು. ದಟ್ಟ ಕಾಡಿನ ಮಧ್ಯದಲ್ಲಿರುವ ಕಾಲುದಾರಿಯಲ್ಲಿ ಸುಮಾರು ೧.೫ ಕಿ ಮೀ ದೂರ ಸಾಗಬೇಕಾಗುತ್ತದೆ.

Комментарии

Информация по комментариям в разработке