Shanubhogara magalu (Bhavageethe) - ಶಾನುಭೋಗರ ಮಗಳು

Описание к видео Shanubhogara magalu (Bhavageethe) - ಶಾನುಭೋಗರ ಮಗಳು

ಶಾನುಭೋಗರ ಮಗಳು
ಸಂಗ್ರಹ - ಗೀತ ಮಾಧುರಿ
ರಚನೆ - ಕೆ. ಎಸ್. ನರಸಿಂಹ ಸ್ವಾಮಿ

Shanubhogara magalu
Album - gIta maadhuri
Lyrics - K.S. Narasimha Swamy


ಶಾನುಭೋಗರ ಮಗಳು ತಾಯಿಯಿಲ್ಲದ ಹುಡುಗಿ ರತ್ನದಂತಹ ಹುಡುಗಿ ಊರಿಗೆಲ್ಲ
ಬಲುಜಾಣೆ ಗಂಭೀರೆ ಹೆಸರು ಸೀತಾದೇವಿ ಹನ್ನೆರಡು ತುಂಬಿಹುದು ಮದುವೆಯಿಲ್ಲ

ತಾಯಿಯಿಲ್ಲದ ಹೆಣ್ಣು ಮಿಂಚಬೀರುವ ಕಣ್ಣು ಒಮ್ಮೊಮ್ಮೆ ಕಣ್ಣೀರ ಸರಸಿಯಹುದು
ತಾಯಿಯಂದದಿ ಬಂದು ತಂಪನೆರೆಯುವುದೆಂದು ಇಂಥ ಬಾಳಿಗೆ ಒಲವೆ ನಿನ್ನ ಕನಸು
ಹತ್ತಿರದ ಕೆರೆಯಿಂದ ತೊಳೆದಬಿ೦ದಿಗೆಯೊಳಗೆ ನೀರ ತರುವಾಗವಳ ನೋಡಬೇಕು
ಕರುವನಾಡಿಸುವಾಗ ಮಲ್ಲಿಗೆಯ ಬನದೊಳಗೆ ಅವಳ ಗಂಡನ ಹೆಸರ ಕೇಳಬೇಕು

ಮೊನ್ನೆ ತಾವರೆಗೆರೆಯ ಜೋಯಿಸರ ಮೊಮ್ಮಗನು ಹೆಣ್ಣ ನೋಡಲು ಬಂದ ಅವರ ಮನೆಗೆ
ವೈದಿಕರ ಮನೆಗಳಲಿ ಊಟ ಹೊತ್ತಾಗುವುದು ಒಲ್ಲೆನೆಂದಳು ಸೀತೆ ಕೋಣೆಯೊಳಗೆ
ಮಗಳ ಮಾತನು ಕೇಳಿ ನಕ್ಕುಬಿಟ್ಟರು ತಂದೆ ಒಳಗೆ ನಂದಾದೀಪ ನಂದಿ ಹೋಗಿ
ಫಲವ ನುಡಿದುದು ಹಲ್ಲಿ ಹೇಳಲೇನಿದೆ ಮುಂದೆ ತೆರಳಿದನು ಜೋಯಿಸನು ತಣ್ಣಗಾಗಿ

ಬೆಳಗಾಗ ಕೆರೆಯ ಬಳಿ ನನ್ನ ತಂಗಿಯ ಕಂಡು ಕನ್ನೆ ತೋರಿದಳಂತೆ ಕಾರಣವನು
ಹೊನ್ನೂರಕೇರಿಯಲಿ ಬಂದಿದ್ದ ಹೊಸ ಗಂಡು ತನ್ನ ಕೂದಲಿಗಿಂತ ಕಪ್ಪು ಎಂದು
ನಮ್ಮೂರಿನಕ್ಕರೆಯ ಸಕ್ಕರೆಯ ಬೊ೦ಬೆಯನು ನೋಡಬೇಕೆ ಇಂಥ ಕಪ್ಪುಗಂಡು
ಶಾನುಭೋಗರ ಮನೆಯ ತೋರಣವೆ ಹೇಳುವುದು ಬಂದ ದಾರಿಗೆ ಸುಂಕವಿಲ್ಲವೆಂದು

ಶಾನುಭೋಗರ ಮಗಳು ರತ್ನದಂತಹ ಹುಡುಗಿ ಗಂಡುಸಿಕ್ಕುವುದೊಂದು ಕಷ್ಟವಲ್ಲ
ಸರಿಯಾದ ಗಂಡೊದಗಿ ಹೆಣ್ಣು ಸುಖವಾಗಿರಲಿ ತಡವಾದರೆನಂತೆ ನಷ್ಟವಿಲ್ಲ


To Buy DVD : http://www.totalkannada.com/

Комментарии

Информация по комментариям в разработке