ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ; ಎಲ್ಲರಿಗೂ ಒಂದೇ ರೀತಿಯ ಊಟ ವ್ಯವಸ್ಥೆ ಆಯೋಜನೆ

Описание к видео ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ; ಎಲ್ಲರಿಗೂ ಒಂದೇ ರೀತಿಯ ಊಟ ವ್ಯವಸ್ಥೆ ಆಯೋಜನೆ

ಸಕ್ಕರೆ ನಾಡು ಮಂಡ್ಯದಲ್ಲಿ ಇದೇ 20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅಧಿಕಾರಿಗಳೊಂದಿಗೆ ಇಂದು ಸಮ್ಮೇಳನದ ಸ್ಥಳ ಪರಿಶೀಲನೆ ನಡೆಸಿದರು.
ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಳದಂಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಚೆಲುವರಾಯಸ್ವಾಮಿ, ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ, ಈ ಬಾರಿಯ ಸಮ್ಮೇಳನದಲ್ಲಿ ವಿವಿಧ ರೀತಿಯ ಮಳಿಗೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿದ್ದು, ಮಳಿಗೆಗಳು ಸಾಹಿತ್ಯ ಸಮ್ಮೇಳನದ ಆಕರ್ಷಣೆಯ ಕೇಂದ್ರವಾಗಲಿವೆ. , ಸಮ್ಮೇಳನಕ್ಕೆ ಬರುವ ಎಲ್ಲರಿಗೂ ಒಂದೇ ರೀತಿಯ ಊಟದ ವ್ಯವಸ್ಥೆ ಮಾಡುವುದರ ಜೊತೆಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
ಸಮ್ಮೇಳನಕ್ಕೆ ಬರುವ ಜಿಲ್ಲೆಯ 7 ತಾಲ್ಲೂಕಿನ ಸಾಹಿತ್ಯಾಸಕ್ತರಿಗೆ ಉಚಿತ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೂರು ದಿನದಲ್ಲಿ ಎರಡು ಗಂಟೆಗಳ ಕಾಲ ನುಡಿ ಜಾತ್ರೆಯ ಸ್ವರಗೀತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ವಿಶೇಷವಾಗಿ ಮೂರನೇ ದಿನ ಪೊಲೀಸ್ ಬ್ಯಾಂಡ್ ನಿಂದ ಸಂಗೀತ ಕಾರ್ಯಕ್ರಮ ಇರಲಿದೆ ಎಂದರು.
ಡಾ. ಮಹೇಶ್ ಜೋಶಿ, ನೂತನ ತಂತ್ರಜ್ಞಾನಗಳನ್ನು ಬಳಸಿಕೊಂಡು ಸಮ್ಮೇಳನವನ್ನು ಆಯೋಜನೆ ಮಾಡಲಾಗಿದೆ, ಸಮ್ಮೇಳನದಲ್ಲಿ ಪ್ರಮುಖ ಪುಸ್ತಕಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

#LiveDDChandanaNews #DDChandanaNews #DDChandana #DDKannada

Комментарии

Информация по комментариям в разработке