//ಶ್ರೀ ಶ್ರೀನಿವಾಸ ಕಲ್ಯಾಣ// ವೈಕುಂಠ ಪತಿ ತಾನು -- ಶ್ರೀ ಪುರಂದರ ದಾಸರು

Описание к видео //ಶ್ರೀ ಶ್ರೀನಿವಾಸ ಕಲ್ಯಾಣ// ವೈಕುಂಠ ಪತಿ ತಾನು -- ಶ್ರೀ ಪುರಂದರ ದಾಸರು

//Lyrics//

//ಶ್ರೀನಿವಾಸ ಕಲ್ಯಾಣ ಮಹೋತ್ಸವ//


ವೈಕುಂಠಪತಿ ತಾನು ವೈಕುಂಠವನೆ ಬಿಟ್ಟು 
ವೇಂಕಟಾದ್ರಿಗೆ ಹೋಗಿ ಶ್ರೀಕಾಂತ ನಿಂತ |
ನಾಲ್ಕು ಕಡೆಯೂ ನೋಡಿ ವಲ್ಮೀಕವನೆ ಕಂಡು 
ಏಕಾಂತಸ್ಥಳವೆಂದು ಬಹುಕಾಲವಲ್ಲಿದ್ದ ||೧||

ಚೋಳಭೃತ್ಯನು ಶಿರವನೊಡೆದ ಗಾಯವ ನೋಡಿ 
ತಾಳಲಾರದೆ ಸ್ವಾಮಿ ಗುರುಗಳನೆ ಕರೆಸಿ | 
ಹೇಳಿದೌಷದಮಾಡಿ ಕ್ರೋಢರೂಪಿಯ ಕಂಡು 
ಕೇಳಿ ಸ್ಥಳವನೆ ಕೊಂಡು ಲೀಲೆ ತೋರುತಲಿ ||೨||

ಇರುತಿರಲು ಒಂದಿನ ತುರಗವನೆ ಸ್ಮರಿಸುತಲಿ 
ತುರಗ ಬರಲು ಕಂಡು ಮುದದಿ ತಾನೇರಿ |
ಪರಿಪರಿ ಮೃಗಗಳ ಅಡವಿಯಲಿ ತಾ ಕೊಂದು 
ಕರುಣಾಸಾಗರ ಒಂದು ವನವ ಕಂಡನು ||೩||

ವನದಲ್ಲಿ ವನಜಾಕ್ಷಿ ರಾಜಪುರ್ತಿಯ ಕಂಡು 
ಮನಕೆ ಬಂದಂತಾಡಿ ಕಲಹ ಮಾಡಿದರು |
ಮನಸಿಜ ತಾನು ಅಶ್ವವ ಕಳಕೊಂಡು ಘನವಾದ 
ಗಿರಿ ಏರಿ ಮಲಗಿದ ಹರಿಯು ||೪||

ನಗಧರ ಮಲಗಲು ಬಕುಳಾವತಿಯು ಆಗ 
ಬಗೆ ಬಗೆ ಕೇಳಲು ಶೋಕದಿಂ ನುಡಿದ |
ಗಗರಾಜನ ಪುತ್ರಿ ಪದ್ಮಾವತಿಯ ಕಂಡು 
ಹಗಲು ಇರಳು ಆಕೆ ಮುಖವ ಸ್ಮರಿಸುವನು ||೫||

ಅವಳಿಗೋಸುಗವಾಗಿ ಇದ್ದಲ್ಲಿಗೆ ಹೋದೆ 
ಅವಳಿಂದ ಎನ್ನಶ್ವ ಹತವಾಯಿತಮ್ಮ |
ಅವಳ ಹೊರೆತು ಎನ್ನ ಪ್ರಾಣವೇ ನಿಲ್ಲದು 
ಅವಳ ಘಟನೆಯ ನೀನು ಮಾಡಬೇಕಮ್ಮ ||೬||

ಅಂದ ಮಾತನು ಕೇಳಿ ಬಕುಳಾವತಿಯು ಆಗ 
ಆನಂದದಿಂ ರಾಜಪುರಕೆ ತೆರಳಿದಳು |
ಸುಂದರಿಯರ ಕಾರ್ಯ ಸ್ಥಿರವಾಗದೆಂದು 
ಚೆಂದುಳ್ಳ ಸ್ತ್ರೀರೂಪ ಧರಿಸಿದನು ಹರಿಯು ||೭||

ಕೊರವಂಜಿ ತಾನಾಗಿ ನೃಪನ ಪುರಕೆ ಹೋಗಿ 
ಧರಣಿದೇವಿಯ ಮುಂದೆ ಶಕುನ ಹೇಳಿದನು |
ತಿರುಗಿ ಬರಲಾತಗೆ ಮಗಳ ಕೊಡುವೆನೆಂದು 
ಹರಿಗೆ ನಿಶ್ಚಯಮಾಡಿ ಶಂಕರ ಕಳುಹಿಸಿದನು ||೮||

ತಾಪಸೋತ್ತಮ ಬಂದು ಪತ್ರವನೆ ಕೊಡಲು 
ಶ್ರೀಪತಿಯು ತಾನೋದಿ ಬೆನ್ಹಿಂದೆ ಬರೆದ |
ಆ ಪರಮ ವಂದ್ಯ ತಾ ಸುರಸ್ತೋಮವನೆ ಕರೆಸಿ 
ಈ ಪರಿ ವೈಭೋಗ ಮಾಡಿದ ಹರಿಯು ||೯||

ಆ ಕ್ಷಣದಲಿ ತಾನು ತರಣಿಯನ ಕರೆಸಿ 
ಇಕ್ಷುಚಾಪನ ಮಾತೆ ಬಳಿಗೆ ಪೋಗೆಂದ |
ತಕ್ಷಣದಲಿ ಸೂರ್ಯ ಹೋಗಿ ನಿಲ್ಲಲು ಹರಿಯ 
ಆಕ್ಷೇಮವನೆ ಕೇಳಿ ತೆರಳಿದಳು ಬೇಗ ||೧೦||

ಬಂದ ಸತಿಯಳ ಕೂಡಿ ಮಂದಿರಕೆ ಪೋಗಿ 
ಹಿಂದೆ ಹೇಳಿದ ವಾಕ್ಯ ನಡೆಸೆಂದ ಹರಿಯು |
ಸಂದೇಹವಿಲ್ಲದೇ ಸ್ವಾಮಿ ನಡೆಸೆಂದು 
ಇಂದಿರಾದೇವಿಯು ನುಡಿದಳು ಹರಿಗೆ ||೧೧||

ಸ್ವಸ್ತಿವಾಚನ ಮಾಡಿ ಕುಲದೇವರನಿಟ್ಟು 
ಪ್ರಸ್ಥವ ಮಾಡಿದ ದ್ವಿಜರ ಸ್ತೋಮಕ್ಕೆ |
ಮರುದಿನ ಲಕ್ಷ್ಮೀಶ ರಾಜನ ಆ ಪುರಕೆ 
ಸುರಸ್ತೋಮವನೆ ಕೂಡಿ ತೆರಳಿ ಬಂದ ||೧೨ ||

ಬರುವ ಕೃಷ್ಣನ ಕಂಡು ಶುಕಮುನಿ ಸಂಸ್ತುತಿಸಿ 
ಹರಿಗೆ ಭೋಜನವನ್ನು ಮುದದಿ ಮಾಡಿಸಿದ |
ಆಕಳಂಕ ಮಹಿಮನು ಬಂದ ವಾರ್ತೆಯ ಕೇಳಿ 
ಸಕಲ ಜನರ ಕೂಡಿ ಕರೆಯೆ ರಾಜ ||೧೩||

ಮುದದಿಂದ ಎದುರುಗೊಂಡು ಪರಿಮಳ ಪೂಸಿ 
ಸದಮಲ ಹೃದಯನ ಕರೆತಂದರು ಮನೆಗೆ | 
ಪದ್ಮನಾಭನ ಪೀಠದಲಿ ಕುಳ್ಳಿರಿಸಿ 
ಮಧುರ ಮಾತಿಲಿ ತನ್ನ ತರುಣಿ ಒಡಗೂಡಿ ||೧೪||

ಹೇನ ಕುಂಭಗಳಿಂದ ದ್ವಿಜರ ಕೈಯೊಳು 
ಸ್ವಾಮಿಪುಷ್ಕರಣಿ ತೋಯವನ್ನೇ ತರಿಸಿ |
ಹೇಮತಟ್ಟೆಯಲ್ಲಿ ಸ್ವಾಮಿ ಪಾದವನ್ನಿಟ್ಟು 
ಪ್ರೇಮದಿಂದಭಿಷೇಕ ಮಾಡಿದನು ರಾಜ ||೧೫||

ಚಿನ್ನದ ಕಿರೀಟ ಆಭರಣವನ್ನಿಟ್ಟು 
ಕನ್ಯಾದಾನವ ಮಾಡಿ ಧನ್ಯನಾದ |
ತನ್ನ ಮಗಳನೆ ಶ್ರೀನಿವಸಗೆ ಒಪ್ಪಿಸಿ 
ಉನ್ನತ ಪದವಿಯಂ ಚೆನ್ನಾಗಿ ಪಡೆದ ||೧೬||

ಮಾವನಪ್ಪಣೆನೊಂಡು ಮೈದಗೊಸ್ತ್ರವ ಕೊಟ್ಟು 
ಭಾವಶುದ್ದದಿ ತನ್ನ ಮಾವಗೊಂದಿಸಿದ |
ಯಾವಾಗ ಕರೆದರೂ ಬರುವೆನು ನಾನೆಂದು 
ಪಾವನ್ನ ಮಾಡೆಂದು ಧರಣೀಗೊಂದಿಸಿದ ||೧೭||

ಅಷ್ಟಗೋಪುರ ಏರಿ ಕಣ್ಣಿಟ್ಟು ನೋಡುತಲಿ 
ಎಷ್ಟು ಹೇಳಲಿ ಈಕೆ ಸುಕೃತಫಲವೆಂತೋ |
ಅಜ ರುದ್ರ ಮೊದಲಾದ ಸುರರು ದ್ವಿಜರೆಲ್ಲ 
ಸುಜನರಂದಣವೇರಿ ಪುರಕೆ ಸಾಗಿದರು ||೧೮||

ಆರು ತಿಂಗಳು ಮೀರಿ ಗಿರಿಗೆ ಪೋಗುವೆನೆಂದು 
ಧೀರ ತಾ ನಿಂತಾನೆ ಕುಂಭಜರಾಶ್ರಮದಿ |
ಧರೆಯೊಳು ಅಣಕೇರಿ ಸುರಪತಿ ಪ್ರಿಯನಾದ 
ಸುಗುಣವೇಂಕಟರನ್ನ ಪುರಂದರವಿಠಲ ||೧೯||
*********

// ಶ್ರೀ ಕೃಷ್ಣಾರ್ಪಣಮಸ್ತು// 🙏🙏

Комментарии

Информация по комментариям в разработке