Barayya Ba Ba ಬಾರೈಯ್ಯ ಬಾ ಬಾ ಭಕುತರ ಪ್ರಿಯ ಶ್ರೀನಿವಾಸ ರಾಯ

Описание к видео Barayya Ba Ba ಬಾರೈಯ್ಯ ಬಾ ಬಾ ಭಕುತರ ಪ್ರಿಯ ಶ್ರೀನಿವಾಸ ರಾಯ

This is one of the best composition of Sri Gopaladasaru. This video taken from a live programme arrange at Thiruvallur(TN). Sri Mysore Ramachandra Acharya sung this song with a ugabhoga as prelude.
ವಾರಿಜಲಯಪತೆ ವಾರಿಜನಾಭನೆ
ವಾರಿಜಭವಪಿತ ವಾರಿಜನೇತ್ರನೆ
ವಾರಿಜಮಿತ್ರ ಅಪಾರಪ್ರಭಾವನೆ
ವಾರಿಜ ಝಾಂಡದ ಕಾರಣ ದೊರೆಯೆ
ಬಾರೈಯ್ಯ ಬಾ ಬಾ ಭಕುತರ ಪ್ರಿಯ ಶ್ರೀನಿವಾಸ ರಾಯ ||ಪ||
ಮಾರ ಜನಕ ಮುಕುತರೊಡೆಯ ದೇವೈಯ್ಯ ಜೀಯ ||ಅಪ||
ಸ್ಯಂದನವೇರಿಬಾಪ್ಪ ರಂಗ ದೇವೋತ್ತುಂಗ
ನಂದ ನಂದನ ಅರಿಮದಭಂಗ ಕರುಣಾಪಾಂಗ
ಸಿಂಧುಶಯನ ಸುಂದರಾಂಗ ಹೇ ನಾರಸಿಂಗ
ಕಂದ ವಿರಿಂಚಿಯು ನಂದಿವಾಹನ ಅಮರೇಂದ್ರ
ಸನಕ ಸನಂದನಾದಿ ಮುನಿ
ವೃಂದ ಬಂದು ನಿಂದು ಧಿಂ ಧಿಂ ಧಿಮಿಕೆಂದು
ನಿಂದಾಡಲು ಆನಂದದಿ ಮನಕೆ ||೧||
ಜಗತ್ ಜನ್ಮಾದಿ ಕರ್ತ ಗೋವಿಂದ
ಉದರದಿ ಲೋಕ ಲಘುವಾಗಿ ಧರಿಸಿದ ಮುಕುಂದ
ಭಕುತರ ಮನಕೆ ಝಗ ಝಗಿಸುತ ಪೊಳೆವಾನಂದ ನಿಗಮಾವಳಿಯಿಂದ
ಅಗಣಿತ ಮುನಿಗಣ ನಗ ಖಗ ಮೃಗ ಶಶಿ
ಗಗನ ಮಣ್ಯಾದ್ಯರು ಸೊಗಸಾಗಿ ಬಗೆ ಬಗೆ
ಪೊಗಳುತಲಿ ಬೇಗ ಜಿಗಿಜಿಗಿದಾಡಲು
ಮುಗುಳುನಗೆಯ ಮಹಾ ಉರಗಗಿರಿವಾಸ ||೨||
ತಡಮಾಡ ಬ್ಯಾಡವೊ ಹೇ ನಲ್ಲ
ವಾಕು ಲಾಲಿಸು ಎನ್ನೊಡೆಯ ಗೋಪಾಲ ವಿಠ್ಠಲ
ದೇವ ಪರಾಕು ಅಡಿ ಇಡು ಭಕ್ತವತ್ಸಲ ಶ್ರೀ ಲಕುಮಿನಲ್ಲ
ಮಡುವಿನೊಳಗೆ ಗಜ ಮೊರೆಯಿಡಲಾಕ್ಷಣ
ಮಡದಿಗೆ ಹೇಳದೆ ದುಡದುಡನೆ ಬಂದು
ಹಿಡಿದು ನಕ್ರನ ಬಾಯ ಕಡಿದು ಬಿಡಿಸಿದನೆ
ಸಡಗರದಲಿ ರಮೆಪೊಡವಿಯೊಡಗೂಡಿ ಬೇಗ ||೩||

Комментарии

Информация по комментариям в разработке